ಪ್ರಧಾನಿ ನರೇಂದ್ರ ಮೋದಿಯವರು ಸಂಪುಟದ ಸಚಿವರಾಗಿ ಕರ್ನಾಟಕದಿಂದ ನಾಲ್ವರು ಸದಸ್ಯರು ಪ್ರಮಾಣವಚನವನ್ನು ಸ್ವೀಕರಿಸಿದ್ದಾರೆ. ಮೋದಿ ನೇತೃತ್ವದ 3ನೇ ಅವಧಿಯ ಕೇಂದ್ರ ಸರ್ಕಾರದಲ್ಲಿ ರಾಜ್ಯದ ಐವರು ಸಂಸದರಿಗೆ ಅವಕಾಶ ಸಿಕ್ಕಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ನಾಲ್ವರು ಸಂಸದರು ಹಾಗೂ ಓರ್ವ ರಾಜ್ಯಸಭಾ ಸದಸ್ಯರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಸಂಜೆ 7:15ಕ್ಕೆ ನರೇಂದ್ರ ಮೋದಿ ಮೂರನೇ ಅವಧಿಗೆ ಪ್ರಧಾನಮಂತ್ರಿಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಬಳಿಕ ಕರ್ನಾಟಕದಿಂದ ಕೇಂದ್ರ ಸಚಿವರಾಗಿ ಹೆಚ್ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ ಸೋಮಣ್ಣ ಹಾಗೂ ಶೋಭಾ ಕರಂದ್ಲಾಜೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮೊದಲಿಗೆ ದೇವರ ಹೆಸರಲ್ಲಿ ಹೆಚ್ಡಿಕೆ ಕೇಂದ್ರ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಮೋದಿ 3.0 ಸರ್ಕಾರದಲ್ಲಿ ಎನ್ಡಿಎ ಮೈತ್ರಿ ಪಕ್ಷವಾಗಿರುವ ಜೆಡಿಎಸ್ಗೆ ಒಂದು ಸಚಿವ ಸಂಪುಟ ದರ್ಜೆ ಸ್ಥಾನ ನೀಡಲಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿರುವುದು ಅವರ ಕುಟುಂಬಕ್ಕೆ ಸಂತಸದ ವಿಷಯವಾಗಿದೆ.