ನರೇಂದ್ರ ಮೋದಿಯವರು 3ನೇ ಅವಧಿಗೆ ಪ್ರಧಾನಿಯಾಗಿ ದೆಹಲಿಯಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. 72 ಸಚಿವರೊಂದಿಗೆ ಮೋದಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ಅಧಿಕಾರ ಸ್ವೀಕರಿಸಿದ ಮೊದಲ ದಿನದಂದು ಮೋದಿ ಕಚೇರಿಗೆ ಬಂದ ಕೂಡಲೇ ಸುಮಾರು 9.3 ಕೋಟಿ ದೇಶದ ರೈತರಿಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ 17 ನೇ ಕಂತಿನ ಸುಮಾರು 20,000 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲು ಸಮ್ಮತಿಯಿರುವ ಕಡತಕ್ಕೆ ಪ್ರಧಾನಿ ಮೋದಿ ಸಹಿ ಹಾಕಿದ್ದಾರೆ.

4 ತಿಂಗಳಿಗೊಮ್ಮೆ 2 ಸಾವಿರ ರೂ. ವರ್ಷಕ್ಕೆ 6 ಸಾವಿರ ರೂ. ನಿಧಿಯ ಮೂಲಕ ರೈತರ ಖಾತೆಗೆ ಹಣ ಜಮೆಯಾಗುತ್ತಿದೆ.

ನಿಧಿ ಬಿಡುಗಡೆಗೆ ಸಹಿ ಹಾಕಿದ ನಂತರ ಮೋದಿ, “ನಮ್ಮದು ಕಿಸಾನ್ ಕಲ್ಯಾಣಕ್ಕೆ ಸಂಪೂರ್ಣವಾಗಿ ಬದ್ಧವಾಗಿರುವ ಸರ್ಕಾರವಾಗಿದೆ. ಮುಂದಿನ ದಿನಗಳಲ್ಲಿ ನಾವು ರೈತರು ಮತ್ತು ಕೃಷಿ ಕ್ಷೇತ್ರಕ್ಕಾಗಿ ಇನ್ನಷ್ಟು ಕೆಲಸ ಮಾಡಬೇಕೆಂದು ಬಯಸುತ್ತೇವೆ ಎಂದು ಮೋದಿ ತಿಳಿಸಿದ್ದಾರೆ.