ಜೂನ್‌ 24ರ ವರೆಗೆ ಪ್ರಜ್ವಲ್‌ ರೇವಣ್ಣಗೆ ಜೈಲು

ಲೈಂಗಿಕ ಕಿರುಕುಳ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನಿಗೆ 14 ದಿನಗಳ ನ್ಯಾಯಾಂಗ ಬಂಧನವನ್ನು ಕೋರ್ಟ್‌ ವಿಧಿಸಿದೆ. ವಿದೇಶದಿಂದ ಭಾರತಕ್ಕೆ ಮೇ 31ರಂದು ಆಗಮಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣರನ್ನು ಎಸ್‌ಐಟಿ ವಶಕ್ಕೆ ಪಡೆದಿತ್ತು.

ಅದಾದ ಬಳಿಕ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿದ್ದಾರೆ. ಕೃತ್ಯ ಎಸಗಿದ್ದ ಸ್ಥಳ ಮಹಜರು ಮಾಡಲಾಗಿತ್ತು. ಇದರ ಬೆನ್ನಲ್ಲೆ ಎರಡನೇ ಭಾರಿಗೆ ವಶಕ್ಕೆ ಪಡೆದಿದ್ದ ಅವಧಿ ಮುಕ್ತಾಯಗೊಂಡಿದೆ. ಪ್ರಜ್ವಲ್ ರೇವಣ್ಣ ಅವರ 10 ದಿನಗಳ ಪೊಲೀಸ್‌ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಈ ವೇಳೆ 42ನೇ ಎಸಿಎಂಎಂ ನ್ಯಾಯಾಲಯವು14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.


Leave a Reply

Your email address will not be published. Required fields are marked *