ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಬಂಧನ ಬೆನ್ನಲ್ಲೇ ಇದೀಗ ನಟಿ ಪವಿತ್ರಾ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು.

ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ. ಕಾಮಾಕ್ಷಿಪಾಳ್ಯದಲ್ಲಿ ರೇಣುಕಾ ಸ್ವಾಮಿಯ ಕೊಲೆ ನಡೆದಿದೆ.

ಪವಿತ್ರಾ ಗೌಡ ಸೋಶಿಯಲ್ ಮೀಡಿಯಾ ಪೋಸ್ಟ್ ಗೆ ರೇಣುಕಾಸ್ವಾಮಿ ಕೆಟ್ಟದಾಗಿ ಕಾಮೆಂಟ್ ಮಾಡಿದ್ದ ಎಂದು ಹೇಳಲಾಗಿತ್ತಿದ್ದು, ಇದೇ ಕಾರಣಕ್ಕೆ ದರ್ಶನ್ ಬಾಡಿಗಾರ್ಡ್ಗಳು ಬೆದರಿಸಲು ಹೋಗಿ ಕೊಲೆ ಮಾಡಿದ್ದಾರೆ ಎಂಬ ಮಾಹಿತಿಯಿದೆ.