ಕಳೆದ ತಿಂಗಳು ಮಾರ್ಚ್ 14 ರಲ್ಲಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ತಮ್ಮ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಮಹಿಳೆಯು ಈ ಹಿಂದೆಯು ಕೆಲವು ಪ್ರಮುಖರ ವಿರುದ್ಧ ದೂರು ನೀಡಿದ್ದರು ಎಂದು ತಿಳಿದು ಬಂದಿದೆ.

ಮೇ ತಿಂಗಳಲ್ಲಿ ದೂರು ನೀಡಿದ್ದ ಸಂತ್ರಸ್ತೆಯ ತಾಯಿ ಮೃತಪಟ್ಟಿಪದ್ದಾರೆ. ಇದೀಗ ಯಡಿಯೂರಪ್ಪ ವಿರುದ್ದ ಅವರಿಗೆ ಸಂಬಂಧಿಸಿದಂತೆ ಪೊಕ್ಸೋ ಪ್ರಕರಣದಡಿ ತನಿಖೆ ನಡೆಸುತ್ತಿರುವ CID ತನಿಖಾಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಯಡಿಯೂರಪ್ಪಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಅಪ್ತಾಪ್ರೆಗೆ ಲೈಂಗಿಕ ದೌರ್ಜನ್ಯ ನೀಡಿದ್ದಾರೆ ಎನ್ನಲಾದ ಪೋಕ್ಸೋ ಕಾಯ್ದೆ ಅಡಿಯ ಬಿಎಸ್ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರದಲ್ಲಿ ಕಳೆದ ಮಾಚ್ 14ರಂದು ದೂರು ನೀಡಲಾಗಿತ್ತು. ಅದಾದ ಬಳಿಕ ಕರ್ನಾಟಕ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿತ್ತು.