ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತ ಆರೋಪಿಗಳ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಬಂಧಿತನನ್ನು ನಟ ಪ್ರದೋಶ್ ಎಂದು ಗುರುತಿಲಾಗಿದೆ. ಈತ ಕೂಡ ಸ್ಯಾಂಡಲ್ ವುಡ್ ನಟನಾಗಿ ಹಲವು ಚಿತ್ರಗಳಲ್ಲಿ ನಟಿಸಿದ್ದು ದರ್ಶನ್ ಜೊತೆಗೆ ಕೂಡ ನಟನೆ ಮಾಡಿದ್ದಾನೆ .

ಕನ್ನಡದ ಕೆಲ ಚಿತ್ರಗಳಲ್ಲಿ ಅಭಿನಯ ಮಾಡಿರುವ ಪ್ರದೋಶ್ ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ A14 ಆರೋಪಿಯಾಗಿದ್ದಾನೆ. ದರ್ಶನ್ ಜೊತೆಗಿನ ಬೃಂದಾವನ, ಬುಲ್ ಬುಲ್ ಚಿತ್ರಗಳಲ್ಲಿ ಪ್ರದೋಶ್ ನಟಿಸಿದ್ದಾನೆ. ಅಲ್ಲದೇ ದರ್ಶನ್ ಆಪ್ತ ವಲಯದಲ್ಲಿ ಗುರುತಿಸಿಕೊಂಡು ಹಿಂದೆ ಮುಂದೆ ಓಡಾಡಿಕೊಂಡಿದ್ದ. ಇದಲ್ಲದೆ ಬಿಜೆಪಿ ಸಚಿವರೊಬ್ಬರ ಜೊತೆ ಆಪ್ತ ಸಹಾಯಕನಾಗಿ ಕೂಡ ಕೆಲಸ ಮಾಡಿದ್ದ. ದರ್ಶನ್ ಹೇಳಿದಾಗ ಹೋಟೆಲ್ ಉದ್ಯಮಿಯಾದ ಪ್ರದೋಶ್ ಮತ್ತಿತರರು ದೇಹವನ್ನು ಸ್ಕಾರ್ಪಿಯೋ ಕಾರಿನಲ್ಲಿ ಒಯ್ದು ಸುಮ್ಮನಹಳ್ಳಿಯ ಅಪಾರ್ಟ್ಮೆಂಟ್ ಒಂದರ ಮುಂಭಾಗದ ಮೋರಿ ಬಳಿ ಎಸೆದು ಹೋಗಿದ್ದಾರೆ.