ನೀಟ್‌ ಯುಜಿ – 1563 ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಗ್ರೇಸ್‌ ಅಂಕ ರದ್ದು

NEET UG ಪರೀಕ್ಷೆಯಲ್ಲಿ 1,500 ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೀಡಲಾಗಿದ್ದ ಗ್ರೇಸ್‌ ಮಾರ್ಕ್ಸ್ ಗಳನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೇಳಿದೆ. ನೀಟ್‌ ಯುಜಿ 2024 ಪರೀಕ್ಷೆ ಮತ್ತು ಅದರ ಫಲಿತಾಂಶಗಳಿಗೆ ಸಂಬಂಧಿಸಿದಂತೆ ವಿವಾದಗಳಿಗೆ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ವಿದ್ಯಾರ್ಥಿಗೆ ಮಹತ್ವದ ಸಲಹೆ ನೀಡಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ನೀಟ್‌ ಅನ್ಯಾಯ ಸೇರಿದಂತೆ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಎಲ್ಲಾ ಅರ್ಜಿಗಳನ್ನು ಜುಲೈ 8 ರಂದು ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್‌ ತಿಳಿಸಿದೆ. ಜೂನ್ 23 ರಂದು ಮರುಪರೀಕ್ಷೆ ನಡೆಯುವ ಸಾಧ್ಯತೆಯಿದ್ದು, ಜುಲೈ 1 ರ ಮೊದಲು ಫಲಿತಾಂಶ ಹೊರಬೀಳಲಿದೆ ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಈ ವೇಳೆ ಸುಪ್ರೀಂ ಕೋರ್ಟ್, ಕೌನ್ಸೆಲಿಂಗ್ ಮುಂದುವರಿಯಲಿದೆ. ನಾವು ಅದನ್ನು ನಿಲ್ಲಿಸುತ್ತಿಲ್ಲ. ಪರೀಕ್ಷೆ ಇದ್ದಾಗ ಎಲ್ಲವನ್ನೂ ಪೂರ್ಣವಾಗಿ ಮಾಡಲಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಯಾರೂ ಭಯಪಡುವ ಅಗತ್ಯವಿಲ್ಲ. ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದುಗೊಳಿಸುವುದು ಸರಿಯಾದ ಕ್ರಮವಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

Leave a Reply

Your email address will not be published. Required fields are marked *