ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದಾಗಲೇ ನಟ ದರ್ಶನ್ ನನ್ನು ಪೊಲೀಸರು ಬಂಧಿಸಿದ್ದಾರೆ. ತಂದೆಯನ್ನು ನೆನೆದು ಪುತ್ರ ವಿನೀಶ್ ಇನ್ಸ್ಟಾಗ್ರಾಮ್ ನಲ್ಲಿ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ. ಕೆಲ ದಿನಗಳ ಹಿಂದೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಇನ್ಸ್ಟಾಗ್ರಾಮ್ ನಲ್ಲಿ ಎಲ್ಲರನ್ನೂ ಅನ್ಫಾಲೋ ಮಾಡಿ, ಫೋಟೊ ಡಿಲೀಟ್ ಮಾಡಿದ್ದರು.

ಇದೇ ವೇಳೆ ನಾನು 15 ವರ್ಷದ ಹುಡುಗನಿದ್ದೇನೆ. ನನಗೂ ಮನಸ್ಸಿದೆ, ಭಾವನೆಗಳಿವೆ ಅನ್ನೋದನ್ನ ಪರಿಗಣಿಸದೇ ನನ್ನ ತಂದೆಯ ಬಗ್ಗೆ ಕೆಟ್ಟ ಕಾಮೆಂಟ್ಸ್ ಮತ್ತು ಆಕ್ಷೇಪಾರ್ಹ ಭಾಷೆಯಲ್ಲಿ ನಿಂದಿಸುತ್ತಿರುವವರಿಗೆ ಧನ್ಯವಾದಗಳು. ನನ್ನ ತಂದೆ ಮತ್ತು ತಾಯಿಯ ಬೆಂಬಲದ ಅಗತ್ಯವಿರುವ ಈ ಕಷ್ಟದ ಸಮಯದಲ್ಲಿಯೂ ನನ್ನನ್ನು ಶಪಿಸುವುದರಿಂದ ನೀವು ಬದಲಾಗುವುದಿಲ್ಲ ಎಂದು ಬರೆದುಕೊಂಡಿದ್ದಾರೆ. ಎಂದು ವಿನೀಶ್ ದರ್ಶನ್ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ.