ಪೋಕ್ಸೋ ಪ್ರಕರಣ – ಸಿಐಡಿ ವಿಚಾರಣೆಗೆ ಬಿಎಸ್‌ವೈ ಹಾಜರು

ಮಾರ್ಚ್ 14 ರಂದು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಪ್ರಕರಣದ ಹೆಚ್ಚಿನ ತನಿಖೆಗೆ ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿ ಆದೇಶ ಮಾಡಿತ್ತು. 

ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ. ತಮ್ಮ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗುತ್ತಿದ್ದಂತೆಯೇ ಮಾಜಿ ಸಿಎಂ ಬಿಎಸ್ ವೈ ನಿರೀಕ್ಷಣಾ ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಯಡಿಯೂರಪ್ಪ ಅವರಿಗೆ ತನಿಖಾ ತಂಡ ಜೂ.17 ರಂದು ಹಾಜರಾಗುವುದಾಗಿ ತಿಳಿಸಿತ್ತು. ಬಿಎಸ್ ಯಡಿಯೂರಪ್ಪ ಪೋಕ್ಸೊ ಕೇಸ್ ತನಿಖೆ ಎದುರಿಸಲು ಇಂದು ಸಿಐಡಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ.

Leave a Reply

Your email address will not be published. Required fields are marked *