15 ಇಲಾಖೆಗಳಿಗೆ ದ್ವಿತೀಯ ದರ್ಜೆ ಸಹಾಯಕರ ಹೆಚ್ಚುವರಿ ಆಯ್ಕೆಪಟ್ಟಿ ಪ್ರಕಟ

ದಿನಾಂಕ 29-02-2020 ರಂದು ಅಧಿಸೂಚಿಸಿರುವ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಹೈದೆರಾಬಾದ್ ಕರ್ನಾಟಕ ವೃಂದದ 201 ಕಿರಿಯ ಸಹಾಯಕರು / ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಹೆಚ್ಚುವರಿ ಆಯ್ಕೆಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ನೇಮಕ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಅಭ್ಯರ್ಥಿಗಳು, ಇದೀಗ ಮತ್ತೊಂದು ಹೆಚ್ಚುವರಿ ಅರ್ಹತಾ ಪಟ್ಟಿಯನ್ನು ಚೆಕ್‌ ಮಾಡಿಕೊಳ್ಳಬಹುದು.

201 ಹೆಚ್‌ಕೆ ಎಸ್‌ಡಿಎ ಹುದ್ದೆಗಳಿಗೆ ಅಂತಿಮ ಆಯ್ಕೆಪಟ್ಟಿಯನ್ನು ದಿನಾಂಕ 09-01-2023 ಹಾಗೂ ಹೆಚ್ಚು ಪಟ್ಟಿಯನ್ನು ದಿನಾಂಕ 05-05-2023 ರಂದು ಪ್ರಕಟಿಸಲಾಗಿತ್ತು. ಪ್ರಸ್ತುತ ಸದರಿ ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಗಾಗಿ 15 ಇಲಾಖೆಗಳಿಂದ ಸ್ವೀಕೃತವಾದ ಪ್ರಸ್ತಾವನೆಯ ಕಾಲಾನುಕ್ರಮದನುಸಾರ 34 ಹುದ್ದೆಗಳ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಹಾಗೂ ಕಟ್‌ಆಫ್‌ ಅಂಕಗಳ ಪಟ್ಟಿಯನ್ನು ದಿನಾಂಕ 15-16-2024 ರಂದು ಆಯೋಗದ ವೆಬ್‌ಸೈಟ್‌ http://kpsc.kar.nic.in ರಡಿಯಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.

Leave a Reply

Your email address will not be published. Required fields are marked *