ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಕಸ್ಟಡಿ ಅಂತ್ಯ- ಕೋರ್ಟ್ ಗೆ ಹಾಜರು

ಲೈಂಗಿಕ ಕಿರುಕುಳ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನಿಗೆ 14 ದಿನಗಳ ನ್ಯಾಯಾಂಗ ಬಂಧನವನ್ನು ಕೋರ್ಟ್‌ ವಿಧಿಸಿತ್ತು. ವಿದೇಶದಿಂದ ಭಾರತಕ್ಕೆ ಮೇ 31ರಂದು ಆಗಮಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣರನ್ನು ಎಸ್‌ಐಟಿ ವಶಕ್ಕೆ ಪಡೆದಿತ್ತು.

ಪ್ರಜ್ವಲ್ ರೇವಣ್ಣ ಅವರ 10 ದಿನಗಳ ಪೊಲೀಸ್‌ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಈ ವೇಳೆ 42ನೇ ಎಸಿಎಂಎಂ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಎರಡೆರಡು ಬಾರಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದರೂ ಪೊಲೀಸರಿಗೆ ತಲೆ ಬಿಸಿ ತಪ್ಪಿಲ್ಲ. ಪ್ರಜ್ವಲ್‌ ರೇವಣ್ಣ ವಿರುದ್ಧ ಪ್ರಬಲ ಸಾಕ್ಷಿಗಳ ಸಂಗ್ರಹಕ್ಕೆ ಎಸ್‌ಐಟಿ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ. ಸಿಐಡಿಯಲ್ಲಿ ದಾಖಲಾಗಿರುವ ಅತ್ಯಾಚಾರ ಪ್ರಕರಣ‌ ಮತ್ತೆ ಕಸ್ಟಡಿಗೆ ಪಡೆಯಲು ಎಸ್ಐಟಿ ತಯಾರಿ ನಡೆಸಿದೆ. ಕಸ್ಟಡಿಗೆ ಪಡೆಯಲು ಕೋರ್ಟ್‌ಗೆ ಎಸ್‌ಐಟಿ (SIT) ಮನವಿ ಮಾಡಲಿದೆ.

Leave a Reply

Your email address will not be published. Required fields are marked *