ತೆರೆದ ಬಾವಿಗೆ ಕಾಡಾನೆ ಬಿದ್ದು ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೆದಮುಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಲಂಗಾಲ ಗ್ರಾಮದಲ್ಲಿ ನಡೆದಿದೆ.

ಸುಮಾರು 48 ವಯಸ್ಸಿನ ಗಂಡಾನೆ ತೆರೆದ ಬಾವಿಗೆ ಬಿದ್ದು ಸಾವನ್ನಪ್ಪಿದೆ. ಗ್ರಾಮ ಪಂಚಾಯತ್ ವತಿಯಿಂದ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಬಾವಿಯನ್ನು ಕೊರೆಯಲಾಗಿತ್ತು. ಸೋಮವಾರ ರಾತ್ರಿ 11 ಗಂಟೆಗೆ ನಿರ್ಮಾಣ ಹಂತದಲ್ಲಿದ್ದ ಬಾವಿಗೆ ಬಿದ್ದು ಆನೆ ಮೃತಪಟ್ಟಿದೆ.