ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು – ಮೈಸೂರು, ಹಾಸನ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ

ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಭವಾನಿ ರೇವಣ‍್ಣ ಅವರಿಗೆ ಹೈಕೋರ್ಟ್ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿತ್ತು. ಮೇ 2ರ ತಡರಾತ್ರಿ ಮೈಸೂರಿನ ಕೆಆರ್​​ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ನೀಡಿದ್ದರು.

ಇದೇ ಪ್ರಕರಣ ವಿಚಾರವಾಗಿ ಎಚ್‌ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರ ಸಂಬಂಧಿಯನ್ನು ಬಂಧಿಸಿ ಎರಡನೇ ಆರೋಪಿಯಾಗಿ ಮಾಡಲಾಗಿತ್ತು. ಇದೀಗ ಹೈಕೋರ್ಟ್‌ನಿಂದ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ಆದರೆ, ಭವಾನಿ ಹಾಸನಕ್ಕೆ ಪ್ರವೇಶ ಮಾಡದಂತೆ ಹೈಕೋರ್ಟ್‌ ನಿರ್ಬಂಧ ವಿಧಿಸಿದೆ. ಹಾಸನದ ಕೆ.ಆರ್. ನಗರ ಮಹಿಳೆಯ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.

ಇದೇ ವೇಳೆ ಒಟ್ಟಾರೆ 85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಉತ್ತರಿಸಿದ್ದಾರೆ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂಬ ವಾದ ಒಪ್ಪಲಾಗುವುದಿಲ್ಲ. ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕೆಂದಿಲ್ಲ. ಸಂತ್ರಸ್ತ ಮಹಿಳೆಗೆ ಊಟ, ಬಟ್ಟೆ ಕೊಟ್ಟಿಲ್ಲವೆಂಬ ವಾದವನ್ನೂ ಒಪ್ಪಲಾಗುವುದಿಲ್ಲ. ಸ್ವತಃ ಸಂತ್ರಸ್ತ ಮಹಿಳೆಯೇ ಭವಾನಿ ಅಕ್ಕ ಬಟ್ಟೆ, ಊಟ ಕಳುಹಿಸಿದ್ದರೆಂದು ಹೇಳಿಕೆ ನೀಡಿದ್ದಾರೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಹೈಕೋರ್ಟ್‌ ಪೀಠದ ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಅವರು ನಿರೀಕ್ಷಣಾ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ.

Leave a Reply

Your email address will not be published. Required fields are marked *