ನಟ ದರ್ಶನ್ ಸರ್ ನನಗೆ ಗುರು ಸಮಾನರು – ರಚಿತಾ ರಾಮ್

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಒಟ್ಟು 19 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣ ಕುರಿತಂತೆ ನಟ ಸುದೀಪ್ , ಉಪೇಂದ್ರ ಪ್ರತಿಕ್ರಿಯೆ ನೀಡಿದ ನಂತರ ಇದೀಗ ಡಿಂಪಲ್ ಕ್ವೀನ್ ರಚಿತಾ ರಾಮ್ ಕೂಡ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ನೋಟ್‌ನ ನಾನು ನಟಿಯಾಗಿಲ್ಲ ಅಲ್ಲ. ಸಾಮಾನ್ಯ ಪ್ರಜೆಯಾಗಿ ಬರೆಯುತ್ತಿದ್ದೇನೆ. ಇತ್ತೀಚೆಗೆ ನಡೆದ ಪ್ರಕರಣದ ಬಗ್ಗೆ ನನ್ನ ಮಾತು.

ಮೊದಲನೇಯದಾಗಿ ರೇಣುಕಾಸ್ವಾಮಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಅವರ ಕುಟುಂಬಕ್ಕೆ ಭಗವಂತ ಧೈರ್ಯ ಭರಿಸುವ ಶಕ್ತಿ ನೀಡಲಿ ಎಂಬ ಪ್ರಾರ್ಥನೆ ಮಾಡುತ್ತೇನೆ. ಈ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆಂಬ ಭರವಸೆ ನನಗಿದೆ.

ನನ್ನನ್ನು ಚಿತ್ರರಂಗಕ್ಕೆ ಪರಿಚಯಿಸಿದ ನಟ ದರ್ಶನ್ ಸರ್ ನನಗೆ ಗುರು ಸಮಾನರು, ನನ್ನ ಜೀವನದ ತಪ್ಪುಗಳನ್ನು ತಿದ್ದಿ ಮಾರ್ಗದರ್ಶನ ನೀಡಿದಂತಹ ವ್ಯಕ್ತಿ. ಇಂತಹ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನುವುದು ನಂಬಲು ಸ್ವಲ್ಪ ಕಷ್ಟವಾಗುತ್ತದೆ. ಏನಿದ್ದರೂ ಸತ್ಯ ಪೊಲೀಸ್ ತನಿಖೆಯಿಂದ ನಮ್ಮ ಮುಂದೆ ಬರಲಿದೆ ಎನ್ನುವುದೇ ನನ್ನ ನಂಬಿಕೆ ಎಂದು ರಚಿತಾ ರಾಮ್ ಬರೆದುಕೊಂಡಿದ್ದಾರೆ.  

Leave a Reply

Your email address will not be published. Required fields are marked *