ಮೆಕ್ಕಾದಲ್ಲಿ ತಾಪಮಾನ ಏರಿಕೆ – ಹಜ್ ಯಾತ್ರೆಯಲ್ಲಿ 68 ಮಂದಿ ಭಾರತೀಯರ ಸಾವು

ತಾಪಮಾನ ಏರಿಕೆಯಿಂದಾಗಿ ಹಜ್​ ಯಾತ್ರೆಗೆ ಮೆಕ್ಕಾಗೆ ತೆರಳಿದ್ದವರ ಪೈಕಿ 550 ಮಂದಿ ಸಾವನ್ನಪ್ಪಿದ್ದರು. ಬಕ್ರೀದ್‌ ಹಬ್ಬದ ಹಿನ್ನೆಲೆಯಲ್ಲಿ ಲಕ್ಷಾಂತರ ಜನ ಹಜ್‌ ಯಾತ್ರೆಗೆ ತೆರಳಿದ್ದರು. ಗರಿಷ್ಠ ಉಷ್ಣಾಂಶ 50 ಡಿಗ್ರಿ ಸೆಲ್ಸಿಯಸ್​ ದಾಟಿದೆ. ಮೃತರ ಪೈಕಿ ಕನಿಷ್ಠ 323 ಮಂದಿ ಈಜಿಪ್ಟಿಯನ್ನರು, ಕನಿಷ್ಠ 60 ಮಂದಿ ಜೋರ್ಡಾನಿಯನ್ನರು, ವಿವಿಧ ದೇಶಗಳ 150ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ಇದೀಗ ಮೃತಪಟ್ಟವರ ಸಂಖ್ಯೆ 645ಕ್ಕೆ ಏರಿಕೆಯಾಗಿದ್ದು, ಈ ಪೈಕಿ 68 ಮಂದಿ ಭಾರತೀಯರೂ ಇದ್ದಾರೆ ಎಂದು ಅರಬ್‌ ರಾಜತಾಂತ್ರಿಕರು ತಿಳಿಸಿದ್ದಾರೆ. ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಲಕ್ಷಾಂತರ ಜನ ಹಜ್ ಯಾತ್ರೆಗೆ ತೆರಳಿದ್ದರು.ಕೆಲವರು ವೃದ್ಧರಿದ್ದರು, ಇನ್ನೂ ಕೆಲವರಿಗೆ ಅನೇಕ ಆರೋಗ್ಯ ಸಮಸ್ಯೆಗಳಿದ್ದವು, ಇನ್ನೂ ಕೆಲವು ಮಂದಿ ಶಾಖದಿಂದಲೇ ಮೃತಪಟ್ಟಿದ್ದಾರೆ. ಇಂಡೋನೇಷ್ಯಾ, ಇರಾನ್, ಸೆನೆಗಲ್, ಟುನೀಶಿಯಾ ಮತ್ತು ಇರಾಕ್‌ನ ಸ್ವಾಯತ್ತ ಕುರ್ದಿಸ್ತಾನ್ ಪ್ರದೇಶಗಳು ಸಹ ಸಾವುನೋವುಗಳನ್ನು ದೃಢಪಡಿಸಿವೆ.

ಈ ವೇಳೆ ಮಿತಿಮೀರಿದ ತಾಪಮಾನ ಏರಿಕೆಯಿಂದ 645 ಮಂದಿ ಯಾತ್ರಿಕರು ಮೃತಪಟ್ಟಿದ್ದು, 2700ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನೋಂದಣಿ ಮಾಡಿಕೊಳ್ಳದೇ ಹಜ್‌ ಯಾತ್ರೆಗೆ ಬರುವವರಿಗೆ ಸೂಕ್ತ ಎಸಿ ಸೌಲಭ್ಯ ಇರುವುದಿಲ್ಲ, ಸೂರು ಸಿಗುವುದಿಲ್ಲ. ಈ ಕಾರಣದಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *