ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರೊಬ್ಬರು ಅಪಾರ್ಟ್ಮೆಂಟ್ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಡೇವಿಡ್ ಜಾನ್ಸನ್ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಎಸ್ಎಲ್ವಿ ಪ್ಯಾರಡೈಸ್ ಅಪಾರ್ಟ್ಮೆಂಟ್ನಲ್ಲಿ 4ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ಮಾಜಿ ಕ್ರಿಕೆಟಿಗ ಸಾವನ್ನಪ್ಪಿದ್ದಾರೆ. 1971ರ ಅಕ್ಟೋಬರ್ 16ರಂದು ಅರಸೀಕೆರೆಯಲ್ಲಿ ಜನಿಸಿದ್ದ ಡೇವಿಡ್ ಜೂಡ್ ಜಾನ್ಸನ್ ಟೀಂ ಇಂಡಿಯಾ ಪರವಾಗಿ ಆಡಿದ್ದಾರೆ. ಅಲ್ಲದೇ ರಣಜಿಯಲ್ಲಿ ಬೆಳಗಾವಿ ಪ್ಯಾಂಥರ್ಸ್, ಕರ್ನಾಟಕ ತಂಡದ ಪರವಾಗಿಯೂ ಆಡಿದ್ದಾರೆ. ಕುಡಿತದ ಚಟ ಹೊಂದಿದ್ದ ಡೇವಿಡ್ ಜಾನ್ಸನ್ ಕೆಲ ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಹೀಗಾಗಿ ಖಿನ್ನತೆಗೆ ಜಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೇವಿಡ್ ಜಾನ್ಸನ್ ಅವರು 1996ರಲ್ಲಿ ಭಾರತ ಪರ 2 ಟೆಸ್ಟ್ ಪಂದ್ಯಗಳನ್ನು ಆಡಿದ್ದರು.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಇದಾಗಿತ್ತು. ಬ್ಯಾಟಿಂಗ್ ಆಲ್ರೌಂಡರ್ ಆಗಿದ್ದ ಅವರು ಟೆಸ್ ನಲ್ಲಿ 8 ರನ್ ಮತ್ತು 3 ವಿಕೆಟ್ ಕಿತ್ತಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಅವರಿಗೆ ಭಾರತ ಪರ ಕೊನೆಯ ಪಂದ್ಯವಾಗಿತ್ತು. ಇದಾದ ಬಳಿಕ ಅವರಿಗೆ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ. ಮೇಲ್ನೋಟಕ್ಕೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕೊತ್ತನೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.