ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಬಗ್ಗೆ ನಾಲಿಗೆ ಬಿಟ್ಟ ನಟ ದರ್ಶನ್ ಮಹಿಳಾ ಅಭಿಮಾನಿ ವಿರುದ್ಧ ಮಂಡ್ಯದ ಕೆ.ಆರ್.ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ದರ್ಶನ್ ಅಭಿಮಾನಿ ಮಂಗಳ ಎಂಬಾಕೆಯ ವಿರುದ್ಧ ದೂರು ದಾಖಲಾಗಿದೆ.

ನಟ ದರ್ಶನ್ ಬಂಧನವಾಗುತ್ತಿದ್ದಂತೆ ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮನಬಂದಂತೆ ಎಲ್ಲರಿಗೂ ಬೈಯುತ್ತಿದ್ದ ಮಂಗಳ, ಇತ್ತೀಚಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಬಾಯಿಗೆ ಬಂದಂತೆ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: – ಗಣಿ ನಾಡಿನಲ್ಲಿ ಸಿಎಂ ಸಿದ್ದರಾಮಯ್ಯ ಯೋಗ

ದರ್ಶನ್ ವಿರುದ್ಧ ಕೊಲೆ ಅಪರಾಧ ಬರುವಂತೆ ಕುಮಾರಸ್ವಾಮಿ ಮಾಡಿದ್ದಾರೆ, ದುಡ್ಡು ಕೊಟ್ಟು ದರ್ಶನ್ ವಿರುದ್ಧ ಧಿಕ್ಕಾರ ಕೂಗಿಸಿದ್ದಾರೆ. ಸುಮಲತಾ ನಿಮಗೆ ಮಂಡ್ಯದಲ್ಲಿ ಸ್ಪರ್ಧಿಸೋಕೆ ಚಾನ್ಸ್ ಕೊಟ್ಟಿದ್ದಕ್ಕೆ ಡಿ ಬಾಸ್ ವಿರುದ್ಧ ಸ್ಕೆಚ್ ಹಾಕಿದ್ದಾರೆ. ಸುಮಲತಾರಿಂದ ಭಿಕ್ಷೆ ಹಾಕಿಸಿಕೊಂಡವರು ಎಂದು ಮಂಗಳ ಹೇಳಿಕೆಯ ವಿಡಿಯೋ ವೈರಲ್ ಆಗಿದೆ. ಕೆ.ಆರ್.ಪೇಟೆ ತಾಲೂಕು ಜೆಡಿಎಸ್ ಘಟಕದ ಅಧ್ಯಕ್ಷ ಜಾನಕೀರಾಮ್ ಅವರು, ಮಂಗಳಾ ಎಂಬ ಮಹಿಳೆ ವಿರುದ್ಧ ದೂರು ನೀಡಿದ್ದಾರೆ.
ಇದನ್ನೂ ಓದಿ:– ಜೈಲಿನಿಂದ ಬಿಡುಗಡೆಗೆ ಹೈಕೋರ್ಟ್ ತಡೆ -ಕೇಜ್ರಿವಾಲ್ ಗೆ ನಿರಾಸೆ