ಟರ್ಫ್ ಕ್ಲಬ್ ಕುದುರೆ ರೇಸ್ ಅನುಮತಿ ಆದೇಶಕ್ಕೆ ಹೈಕೋರ್ಟ್ ತಡೆ

 ಬೆಂಗಳೂರು, ಜೂ.೨೨-ಸಿಲಿಕಾನ್ ಸಿಟಿ ಬೆಂಗಳೂರಿನ ಟರ್ಫ್ ಕ್ಲಬ್‌ನಲ್ಲಿ (ರೇಸ್ ಕೋರ್ಸ್) ಕುದುರೆ ಪಂದ್ಯಗಳ ಆಯೋಜನೆಗೆ ನೀಡಿದ್ದ ಅನುಮತಿಗೆ ಏಕಸದಸ್ಯಪೀಠದ ಮಧ್ಯಂತರ ಆದೇಶಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ತಡೆ ನೀಡಿದೆ.ರೇಸ್ ಕೋರ್ಸ್‌ನಲ್ಲಿ ಷರತ್ತುಗಳ ಅನ್ವಯ ಕುದುರೆ ಪಂದ್ಯಗಳನ್ನು ಆಯೋಜನೆ ಮಾಡುವುದಕ್ಕೆ ಅನುಮತಿ ನೀಡಿದ್ದ ಮಧ್ಯಂತರ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ಇಂದು ನಡೆಯಿತು. ಚಾದ-ಪ್ರತಿವಾದ ಆಲಿಸಿದ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ನ್ಯಾಯಪೀಠ ತಡೆ ವಿಧಿಸಿ ಆದೇಶ ನೀಡಿತು.ಇನ್ನೂ ವಿಚಾರಣೆ ಸಂದರ್ಭದಲ್ಲಿ ಸರ್ಕಾರವು ಮೇಲ್ಮನವಿಯಲ್ಲಿ ಕೋರಿರುವ ಅಂಶಗಳಲ್ಲಿ ಕುದುರೆ ಪಂದ್ಯಗಳ ಆಯೋಜಿಸದಂತೆ ಕೋರಿರುವುದಕ್ಕೆ ಬಲವಾದ ಕಾರಣಗಳನ್ನು ನೀಡಿದೆ. ಈ ನಿಟ್ಟಿನಲ್ಲಿ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಿದ್ದ ಏಕಸದಸ್ಯ ಪೀಠದ ಆದೇಶವನ್ನು ಅಮಾನತ್ತಿಲ್ಲಿಟ್ಟಿರುವುದಾಗಿ ಪೀಠ ಉಲ್ಲೇಖಿಸಿದೆ.ಮುಖ್ಯವಾಗಿ ಅರ್ಜಿ ವಿಚಾರಣೆ ಪೂರ್ಣಗೊಳಿಸುವವರೆಗೂ  ಬೆಂಗಳೂರು ಟರ್ಫ್ ಕ್ಲಬ್‌ನಲ್ಲಿ ಆನ್ ಕೋರ್ಸ್ ಮತ್ತು ಆಫ್ ಕೋರ್ಸ್‌ಗಳ ಆಯೋಜನೆಗೆ ನಿಬಂಧ ವಿಧಿಸಲಾಗಿದೆ.

ಅರ್ಜಿಯ ಮುಂದಿನ ವಿಚಾರಣೆಯನ್ನು ಆಗಸ್ಟ್ ೧೨ಕ್ಕೆ ಮುಂದೂಡಲಾಗಿದೆ.ಇದಕ್ಕೂ ಮುನ್ನ ಅರ್ಜಿ ವಿಚಾರಣೆ ಸಂದರ್ಭದಲ್ಲಿ ವಾದ ಮಂಡಿಸಿದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ರೇಸ್ ಕೋರ್ಸ್‌ನಲ್ಲಿ ಕುದುರೆ ಪಂದ್ಯಗಳ ನಡೆಸುವ ವೇಳೆ ಬುಕ್ಕಿಗಳು ದೊಡ್ಡಮಟ್ಟದ ಅವ್ಯವಹಾರ ನಡೆಸಿದ್ದಾರೆ. ಈ ಸಂಬಂಧ ಸಿಸಿಬಿ ನಡೆಸಿದ ದಾಳಿಯಲ್ಲಿ ಹಣ, ಬೆಟ್ ಮಾಡುವವರಿಗೆ ಪೆನ್ಸಿಲ್‌ನಿಂದ ಬರೆದ ಟಿಕೆಟ್ ನೀಡುತ್ತಿದ್ದ ಕೋಟ್ಯಂತರ ರೂ.ಗಳ ಅವ್ಯವಹಾರ ಬೆಳಕಿಗೆ ಬಂದಿದೆ. ಇದರಿಂದ ಸರ್ಕಾರಕ್ಕೆ ಬರಬೇಕಾದ ತೆರಿಗೆ ವಂಚನೆ ಮಾಡಲಾಗಿದೆ ಎಂದರು.ಅಷ್ಟೇ ಮಾತ್ರವಲ್ಲದೆ, ಆಟೋ ಚಾಲಕರು ಸೇರಿದಂತೆ ಬಡ ಜನತೆ ತಾವು ದಿನಪೂರ್ತಿ ದುಡಿದ ಹಣವನ್ನು ಕುದುರೆ ಪಂದ್ಯಗಳಿಗೆ ವಿನಿಯೋಗಿಸುತ್ತಿದ್ದು, ಜೀವನ ನಡೆಸುವುದು ಕ?ಕರವಾಗುತ್ತಿದೆ. ಈ ನಿಟ್ಟಿನಲ್ಲಿ ಕುದುರೆ ಪಂದ್ಯಗಳಿಗೆ ಅನುಮತಿ ನೀಡಬಾರದು ಎಂದು ಕೋರಿದರು. ಬೆಂಗಳೂರು ಟರ್ಫ್ ಕ್ಲಬ್ ಲಿಮಿಟೆಡ್, ಕರ್ನಾಟಕ ಟ್ರೈನರ್ಸ್ ಅಸೋಸಿಯೇಷನ್ಸ್, ಕರ್ನಾಟಕ ರೇಸ್ ಕುದುರೆ ಮಾಲೀಕರ ಸಂಘ, ಕರ್ನಾಟಕ ಜಾಕಿಗಳ ಸಂಘದ ಪರ ವಕೀಲರು, ರೇಸ್ ಕೋರ್ಸ್‌ನಲ್ಲಿ ಬೆಟ್ಟಿಂಗ್ ಕಾನೂನುಬದ್ಧವಾಗಿದೆ. ಇದರಿಂದ ಸರ್ಕಾರಕ್ಕೆ ಕೋಟ್ಯಂತರ ರೂ. ತೆರಿಗೆ ಸಂಗ್ರಹವಾಗುತ್ತಿದೆ. ಆದರೆ, ಬೆಟ್ಟಿಂಗ್‌ನಿಂದ ಬಡ ಜನತೆಗೆ ತೊಂದರೆಯಾಗಲಿದೆ ಎನ್ನುವುದಾದರೆ ಸರ್ಕಾರ ಬೆಟ್ಟಿಂಗ್ ನಡೆಸುವುದನ್ನು ಕಾನೂನುಬಾಹಿರ ಎಂಬುದಾಗಿ ಘೋ?ಣೆ ಮಾಡಲಿ ಎಂದರು.ಅಲ್ಲದೆ, ಕುದುರೆ ಪಂದ್ಯ ಒಂದು ಕ್ರೀಡೆಯಾಗಿದೆ. ಕ್ರೀಡೆಯಲ್ಲಿ ಭಾಗವಹಿಸಲು ದೇಶದ ವಿವಿಧ ಭಾಗಗಳಿಂದ ಜಾಕಿಗಳು ಈಗಾಗಲೇ ಬೆಂಗಳೂರಿಗೆ ಬಂದು ನೆಲೆಸಿದ್ದಾರೆ. ಏಕಸದಸ್ಯಪೀಠ ಪಂದ್ಯಗಳ ಆಯೋಜನೆಗೆ ಅವಕಾಶ ನೀಡಿದೆ. ಇದೀಗ ಸರ್ಕಾರ ಪಂದ್ಯಗಳ ಆಯೋಜನೆಗೆ ಅವಕಾಶ ನೀಡದಂತೆ ಕೋರಿದರೆ ಅದನ್ನೇ ನಂಬಿ ಜೀವನ ನಡೆಸುತ್ತಿರುವವರಿಗೆ ತೊಂದರೆಯಾಗಲಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *