ಬೆಂಗಳೂರು: ಮುಖ್ಯಮಂತ್ರಿ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಬೇಕು ಎಂಬ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಸಿಎಂ ಸ್ಥಾನ ಹೈಕಮಾಂಡ್ ತೀರ್ಮಾನ ಮಾಡುತ್ತೆ ಸ್ವಾಮೀಜಿ ಅವರಲ್ಲ ಎಂದು ಗರಂ ಆದರು.

ಇಂದು ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತೋತ್ಸವ ಸಮಾರಂಭ ನಡೆಯಿತು. ಈ ಸಮಾರಂಭದಲ್ಲಿ ಮಾತನಾಡಿದ ಸ್ವಾಮೀಜಿ, ಸಿದ್ದರಾಮಯ್ಯನವರು ಮುಂದೆ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂದು ಹೇಳಿದ್ದಾರೆ.
ಸಿದ್ದರಾಮಯ್ಯನವರು ಮನಸ್ಸು ಮಾಡಿದರೆ ಮಾತ್ರ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲು ಸಾಧ್ಯ. ಈಗಾಗಲೇ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿ ಅನುಭವ ಹೊಂದಿದ್ದಾರೆ. ನಮ್ಮ ಸಮುದಾಯದ ಡಿ.ಕೆ ಶಿವಕುಮಾರ್ ಅವರಿಗೆ ಮುಂದೆ ಅವಕಾಶ ಮಾಡಿಕೊಡಲಿ ಎಂದು ತಿಳಿಸಿದರು. ‘