ಇಂದಿನಿಂದ ಸಂಸತ್‌ ಅಧಿವೇಶನ ಆರಂಭ 

ನವದೆಹಲಿ: ಆಡಳಿತಾರೂಢ ಎನ್‌ಡಿಎ ಮತ್ತು ಪ್ರಬಲ ವಿಪಕ್ಷ ಇಂಡಿಯಾ ಮೈತ್ರಿಕೂಟದ ನಡುವಿನ ಜಿದ್ದಾಜಿದ್ದಿಗೆ ವೇದಿಕೆಯಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನ (Budget Session) ಇಂದಿನಿಂದ ಆರಂಭವಾಗಲಿದೆ.

ಇಂದಿನಿಂದ (ಜು.22) ಆ.12ರ ವರೆಗೆ ಅಧಿವೇಶನ ನಡೆಯಲಿದೆ. ಮುಂಗಾರು ಅಧಿವೇಶನದ ಮೊದಲ ದಿನವಾದ ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸಮೀಕ್ಷಾ ವರದಿ ಮಂಡಿಸಲಿದ್ದಾರೆ. ನಾಳೆ ತಮ್ಮ ದಾಖಲೆಯ 7ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ.

19 ದಿನಗಳ ಕಾಲ ನಡೆಯಲಿರುವ ಅಧಿವೇಶನ ಆಡಳಿತ ಮತ್ತು ವಿಪಕ್ಷಗಳ ನಡುವಿನ ವಾಕ್ಸಮರಕ್ಕೆ ಕಾರಣವಾಗುವ ಸಾಧ್ಯತೆ ಇದೆ. ನೀಟ್‌, ನೆಟ್‌ ಪರೀಕ್ಷಾ ಅಕ್ರಮ, ಐಎಎಸ್‌ ಅಧಿಕಾರಿಗಳ ನೇಮಕಾತಿ ವಿವಾದ, ಅಗ್ನಿವೀರ್‌ ಯೋಜನೆ, ಮಣಿಪುರ ಹಿಂಸಾಚಾರ, ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಉಗ್ರರ ದಾಳಿ ಮೊದಲಾದ ವಿಷಯಗಳನ್ನು ಮುಂದಿಟ್ಟುಕೊಂಡು ಮೋದಿ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಇಂಡಿಯಾ ಮೈತ್ರಿಕೂಟ ಸಜ್ಜಾಗಿದೆ.ಈ ಅಧಿವೇಶನದಲ್ಲಿ 5 ಮಸೂದೆ ಮಂಡನೆಗೆ ಕೇಂದ್ರ ಸರ್ಕಾರ ಸಜ್ಜಾಗಿದೆ. ಹಣಕಾಸು ಮಸೂದೆ, 2024. ವಿಪತ್ತು ನಿರ್ವಹಣೆ (ತಿದ್ದುಪಡಿ) ಮಸೂದೆ, 2024 PRS ಶಾಸನದ ಪ್ರಕಾರ, ವಿಪತ್ತು ನಿರ್ವಹಣೆಯಲ್ಲಿ ಕೆಲಸ ಮಾಡುವ ವಿವಿಧ ಸಂಸ್ಥೆಗಳ ಪಾತ್ರಗಳಲ್ಲಿ ಸ್ಪಷ್ಟತೆ ಮತ್ತು ಒಮ್ಮುಖವನ್ನು ತರಲು ಪ್ರಯತ್ನಿಸುತ್ತದೆ.

ಭಾರತೀಯ ವಾಯುಯಾನ ವಿಧೇಯಕ- 2024 ಏರ್‌ಕ್ರಾಫ್ಟ್ ಆಕ್ಟ್, 1934 ಅನ್ನು ಬದಲಿಸುತ್ತದೆ. ಅಸ್ಪಷ್ಟತೆಗಳು ಮತ್ತು ಪುನರಾವರ್ತನೆಗಳನ್ನು ಪರಿಹರಿಸಲು, ಉತ್ಪಾದನೆ ಮತ್ತು ವ್ಯವಹಾರವನ್ನು ಸುಲಭಗೊಳಿಸಲು, ಅಂತರರಾಷ್ಟ್ರೀಯ ಸಂಪ್ರದಾಯಗಳ ನಿಬಂಧನೆಗಳನ್ನು ಜಾರಿಗೆ ತರಲು ಮತ್ತು ಅಂತರರಾಷ್ಟ್ರೀಯ ಮಾನದಂಡಗಳನ್ನು ಜಾರಿಗೆ ತರಲು ಅನುವು ಮಾಡಿಕೊಡುತ್ತದೆ.

ಪೇಜ್ ಲೈಕ್ ಮಾಡಿ ಮತ್ತು ಸಬ್ಸ್ಕೈಬ್ ಮಾಡಿ

Leave a Reply

Your email address will not be published. Required fields are marked *