ರಾಜ್ಯದಲ್ಲಿ ಇನ್ನೂ 6 ದಿನ ಮುಂದುವರಿಯಲಿದೆ ಮಳೆಯ ಆರ್ಭಟ 

ಬೆಂಗಳೂರು: ರಾಜ್ಯದಲ್ಲಿ  ಇನ್ನೂ 6 ದಿನ ಮಳೆಯ  ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕಳೆದ ಒಂದು ವಾರದಿಂದ ರಾಜ್ಯದ ಕರಾವಳಿ ಭಾಗದಲ್ಲಿ ವರುಣ ಅಬ್ಬರಿಸುತ್ತಿದ್ದು, ಇಂದಿನಿಂದ 6 ದಿನಗಳವರೆಗೆ ಮಳೆ ಮುಂದುವರಿಯಲಿದೆ ಎಂದು ಯಹವಾಮಾನ ಇಲಾಖೆ ತಿಳಿಸಿದೆ.

ಈ ಹಿನ್ನೆಲೆ ಕರಾವಳಿಯ ಎಲ್ಲಾ ಜಿಲ್ಲೆಗಳಿಗೂ ಇಂದಿನಿಂದ 4 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಇನ್ನೂ 4 ದಿನ ಮೋಡ ಕವಿದ ವಾತಾವರಣವಿರಲಿದೆ. ಅಲ್ಲದೇ ಬೆಂಗಳೂರು ನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಪೇಜ್ ಲೈಕ್ ಮಾಡಿ ಮತ್ತು ಸಬ್ಸ್ಕೈಬ್ ಮಾಡಿ

Leave a Reply

Your email address will not be published. Required fields are marked *