ಪಾದಯಾತ್ರೆ ವ್ಯಕ್ತಿಯ ವಿರುದ್ಧವಲ್ಲ, ಸರ್ಕಾರದ ಭ್ರಷ್ಟ ವ್ಯವಸ್ಥೆ ವಿರುದ್ಧ

ಚಾಮುಂಡಿ ಬೆಟ್ಟ(ಮೈಸೂರು): ಮೈಸೂರು ಅಭಿವೃದ್ಧಿ ಪ್ರಾಧಿಕಾರ (MUDA) ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಆಡಳಿತಾರೂಢ ಕಾಂಗ್ರೆಸ್​ ಸರ್ಕಾರ ಅಕ್ರಮ ಎಸಗಿದೆ ಎಂದು ಆರೋಪಿಸಿ ಇಂದು ಶನಿವಾರ ಬಿಜೆಪಿ-ಜೆಡಿಎಸ್​ ಜಂಟಿಯಾಗಿ ಬೆಂಗಳೂರು-ಮೈಸೂರು ಪಾದಯಾತ್ರೆಗೆ ಚಾಲನೆ ನೀಡಲಿದೆ.

ಪಾದಯಾತ್ರೆ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮೈಸೂರು ಚಾಮುಂಡೇಶ್ವರಿ ಸನ್ನಿಧಿಗೆ ಕುಟುಂಬಸ್ಥರೊಂದಿಗೆ ಹೋಗಿ ವಿಶೇಷ ಪೂಜೆ ಸಲ್ಲಿಸಿ ಪಾದಯಾತ್ರೆ ಯಶಸ್ವಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡೇಶ್ವರಿತಾಯಿ ಬಳಿ ಪ್ರಾರ್ಥಿಸಿದ್ದೇನೆ. ಪಾದಯಾತ್ರೆಗೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ, ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ. ಕಾಂಗ್ರೆಸ್ ಸರ್ಕಾರ ಅಹಿಂದ ಹೆಸರಿನಲ್ಲಿ ಅಧಿಕಾರ ಹಿಡಿದಿದೆ. ಆದರೆ ಅಹಿಂದ ವರ್ಗಕ್ಕೆ ಸಿದ್ದರಾಮಯ್ಯ ಸರ್ಕಾರ ದ್ರೋಹ ಬಗೆದಿದೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮಿತಿಮೀರಿ ಹೋಗಿದೆ. ತುಳಿತಕ್ಕೊಳಗಾದವರಿಗೆ ನ್ಯಾಯ ಸಿಗಬೇಕು, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಸೈಟ್ ಹಗರಣ, ಎಸ್ ಸಿಪಿ, ಟಿಎಸ್ ಪಿ ಹಣ ದುರ್ಬಳಕೆ ಖಂಡಿಸಿ ಮೈಸೂರು ಪಾದಯಾತ್ರೆ ಮಾಡುತ್ತಿದ್ದೇವೆ ಎಂದರು.

ಮೈಸೂರು ಚಲೋ: ಮೈಸೂರು ಚಲೋ ಪಾದಯಾತ್ರೆ ಇಂದು ಕೆಂಗೇರಿಯ ಕೆಂಪಮ್ಮ ದೇಗುಲದಿಂದ ಆರಂಭವಾಗಿ ಆಗಸ್ಟ್ 10ರಂದು ಮುಕ್ತಾಯವಾಗಲಿದೆ. ಪ್ರತಿದಿನ 20 ಕಿಲೋ ಮೀಟರ್​​ ಪಾದಯಾತ್ರೆ ಸಾಗಲಿದೆ. ಪಾದಯಾತ್ರೆಯಲ್ಲಿ 224 ಕ್ಷೇತ್ರಗಳ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಇಂದು 8 ವಿಧಾನಸಭಾ ಕ್ಷೇತ್ರಗಳ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಒಂದೊಂದು ದಿನ ಒಂದೊಂದು ಮೋರ್ಚಾದವರು ಭಾಗಿಯಾಗುತ್ತಾರೆ. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಒಂದು ತಂಡ ಭಾಗಿಯಾದರೆ, ಮಧ್ಯಾಹ್ನದಿಂದ ಸಂಜೆಯವರೆಗೆ ಮತ್ತೊಂದು ತಂಡ ಭಾಗಿಯಾಗುತ್ತದೆ. ಪಾದಯಾತ್ರೆ ಯಶಸ್ವಿಗೆ ಎರಡು ಪಕ್ಷಗಳಿಂದ ಸಮನ್ವಯ ತಂಡ ರಚಿಸಲಾಗಿದೆ.

ವೈಯಕ್ತಿಕ ದ್ವೇಷವಲ್ಲ: ನಿನ್ನೆ ಈ ಬಗ್ಗೆ ಪ್ರತಿಕ್ರಿಯಿಸಿದ್ದ ವಿಜಯೇಂದ್ರ, ಪಾದಯಾತ್ರೆಯು ಯಾವುದೇ ವ್ಯಕ್ತಿಯನ್ನು ಗುರಿಯಾಗಿಸಲು ಅಲ್ಲ, ಆದರೆ ಭ್ರಷ್ಟ, ಬಡವರು ಮತ್ತು ದಲಿತರ ಸೌಲಭ್ಯಗಳನ್ನು ಕಸಿದುಕೊಳ್ಳುವ ವ್ಯವಸ್ಥೆಯ ವಿರುದ್ಧವಾಗಿದೆ.

ಪೇಜ್ ಲೈಕ್ ಮಾಡಿ ಮತ್ತು ಸಬ್ಸ್ಕೈಬ್ ಮಾಡಿ

Leave a Reply

Your email address will not be published. Required fields are marked *