ನಿಗದಿಯಾಗಿದ್ದ ಕೊಪ್ಪಳ, ವಿಜಯನಗರ ಸಿಎಂ ಪ್ರವಾಸ ದಿಢೀರ್‌ ರದ್ದು

ಬಳ್ಳಾರಿ: ಮುಡಾ ಹಗರಣದ ಆರೋಪ ಹಾಗೂ ಬಿಜೆಪಿ- ಜೆಡಿಎಸ್‌ ಪಾದಯಾತ್ರೆಯಿಂದ ಸಿಎಂ ಸಿದ್ದರಾಮಯ್ಯ ವಿಚಲಿತರಾದ್ರಾ? ಹೀಗೊಂದು ಪ್ರಶ್ನೆ ಈಗ ಎದ್ದಿದೆ.

ನಿಗದಿಯಾಗಿದ್ದ ವಿಜಯನಗರ ಜಿಲ್ಲಾ ಪ್ರವಾಸವನ್ನು ಸಿಎಂ ಸಿದ್ದರಾಮಯ್ಯ ದಿಢೀರ್ ರದ್ದು ಮಾಡಿದ್ದರಿಂದ ಈ ಪ್ರಶ್ನೆ ಎದ್ದಿದೆ. 

ಮಂಗಳವಾರ ಕೊಪ್ಪಳ ಹಾಗೂ ವಿಜಯನಗರದಲ್ಲಿ ಸಿದ್ದರಾಮಯ್ಯ ಪ್ರವಾಸ ನಿಗದಿಯಾಗಿತ್ತು. ಭರ್ಜರಿ ಮಳೆಯಿಂದ ಭರ್ತಿಯಾದ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯಕ್ಕೆ ಸಿಎಂ ಬಾಗಿನ ಅರ್ಪಿಸಬೇಕಿತ್ತು.

ಈ ಬಾಗಿನ ಅರ್ಪಿಸುವ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಚೇರಿ ದೃಢಪಡಿಸಿತ್ತು. ಆದರೆ ಮುಖ್ಯಮಂತ್ರಿಗಳು ಬರುವುದಕ್ಕೆ ಒಂದು ದಿನಕ್ಕೆ ಮೊದಲೇ ಕಾರ್ಯಕ್ರಮ ಮುಂದೂಡಿಕೆಯಾಗಿದೆ. 

ತಾತ್ಕಾಲಿಕವಾಗಿ ಸಿಎಂ ಕಾರ್ಯಕ್ರಮ ಮುಂದೂಡಿಕೆಯಾದ ಬಗ್ಗೆ ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಪೇಜ್ ಲೈಕ್ ಮಾಡಿ ಮತ್ತು ಸಬ್ಸ್ಕೈಬ್ ಮಾಡಿ

Leave a Reply

Your email address will not be published. Required fields are marked *