ಮಂಡ್ಯ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಹುಚ್ಚಾಟ ನಡೆಸಿದ ಖಾಸಗಿ ಬಸ್ ಚಾಲಕ ಮತ್ತು ಸಹ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಚಾಲಕ ವಿರುದ್ಧ ದಿಕ್ಕಿನಲ್ಲಿ ಬಸ್ ಓಡಿಸುತ್ತಿರುವ ವೀಡಿಯೋವನ್ನು ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ವಿಡಿಯೋ ನೋಡಿದ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದರು. ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಟ್ಯಾಗ್ ಮಾಡಿ ಎಕ್ಸ್ ಖಾತೆ ಮೂಲಕ ಈ ವೀಡಿಯೋ ಪೋಸ್ಟ್ ಮಾಡಲಾಗಿದೆ.

ವಿಡಿಯೋ ವೈರಲ್ ಆಗುತ್ತಿದ್ದಂತೆ ಶ್ರೀರಂಗಪಟ್ಟಣ ಗ್ರಾಮಾಂತರ ಪೋಲೀಸರು ಕಾರ್ಯಾಚರಣೆ ನಡೆಸಿ ಚಾಲಕ ಪ್ರಶಾಂತ್ ಹಾಗೂ ಸಹ ಚಾಲಕ ನೀಲಪ್ಪನನ್ನು ಬಂಧಿಸಿ, ಸಂಚಾರ ನಿಯಮ ಉಲ್ಲಂಘನೆ ಆರೋಪದಡಿ ಶ್ರೀರಂಗಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಂಚಾರ ನಿಯಮ ಉಲ್ಲಂಘಿಸಿ ವಿರುದ್ಧ ದಿಕ್ಕಿನಲ್ಲಿ ಓಡಿಸಿದ್ದಕ್ಕೆ ಬಸ್ ಜಪ್ತಿ ಮಾಡಲಾಗಿದೆ.
ಪೇಜ್ ಲೈಕ್ ಮಾಡಿ ಮತ್ತು ಸಬ್ಸ್ಕೈಬ್ ಮಾಡಿ