ನಿರ್ದೇಶಕ ಯೋಗರಾಜ ಭಟ್ ವಿರುದ್ಧ ಎಫ್‌ ಐ ಆರ್ ದಾಖಲು

ಬೆಂಗಳೂರು : ಖ್ಯಾತ ಸಿನೆಮಾ ನಿರ್ದೇಶಕ ಯೋಗರಾಜ ಭಟ್ ವಿರುದ್ಧ ಎಫ್‌ಐಆರ್ ದಾಖಲಾದ ಬಗ್ಗೆ ವರದಿಯಾಗಿದೆ.
‘ಮನದ ಕಡಲು’ ಸಿನಿಮಾ ಚಿತ್ರೀಕರಣದ ವೇಳೆ 30 ಅಡಿ ಎತ್ತರದ ಏಣಿಯಿಂದ ಬಿದ್ದು ಲೈಟ್ ಬಾಯ್ ಮೃತಪಟ್ಟ ಘಟನೆ ಬೆಂಗಳೂರಿನ ಮಾದನಾಯಕನ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಈ ಸಂಬಂಧ ಚಿತ್ರದ ನಿರ್ದೇಶಕ ಯೋಗರಾಜ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.

ತುಮಕೂರು ಜಿಲ್ಲೆಯ ಕೊರಟಗೆರೆ ಮೂಲದ ಮೋಹನಕುಮಾರ (30) ಮೃತ ಲೈಟ್ ಬಾಯ್. ಸೆ.3ರಂದು ಮಾದನಾಯಕನಹಳ್ಳಿ ಸಮೀಪದ ವಿಆರ್‌ಎಲ್ ಅರೇನಾ ಬಳಿ ಚಿತ್ರೀಕರಣ ನಡೆಯುತ್ತಿತ್ತು. ಆ ವೇಳೆ ಅವಘಡ ಸಂಭವಿಸಿದೆ.

ಮೃತ ಮೋಹನ್ ಹಾಗೂ ಅವರ ಸಹೋದರ ಬೆಂಗಳೂರು ನಗರದ ಬಡಾವಣೆಯೊಂದರಲ್ಲಿ ನೆಲೆಸಿದ್ದರು. ಚಿತ್ರರಂಗದಲ್ಲಿ ಇಬ್ಬರೂ ಲೈಟ್ ಬಾಯ್‌ಗಳಾಗಿ ಕೆಲಸ ಮಾಡುತ್ತಿದ್ದರು. ಸೆ.3ರಂದು ಚಿತ್ರೀಕರಣದ ವೇಳೆ ಮೋಹನ್ 30 ಅಡಿ ಎತ್ತರದ ಏಣಿಯಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. ನಂತರ ಅವರನ್ನು ಗೊರಗುಂಟೆ ಪಾಳ್ಯದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಗುರುವಾರ ಮೃತಪಟ್ಟಿದ್ದಾರೆ.
ಚಿತ್ರೀಕರಣದ ವೇಳೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದ ಆರೋಪ ಅಡಿ ಚಿತ್ರ ನಿರ್ದೇಶಕ ಯೋಗರಾಜ್ ಭಟ್ ಹಾಗೂ ವ್ಯವಸ್ಥಾಪಕ ಸುರೇಶ್ ಸೇರಿ ಮೂವರ ವಿರುದ್ಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ ಎಂದು ತಿಳಿದುಬಂದಿದೆ.

ಪೇಜ್ ಲೈಕ್ ಮಾಡಿ ಮತ್ತು ಸಬ್ಸ್ಕೈಬ್ ಮಾಡಿ

Leave a Reply

Your email address will not be published. Required fields are marked *