ಪೋರ್ಶೆ ಕಾರು ಅಪಘಾತ ಪ್ರಕರಣ- ಆರೋಪಿ ಅಪ್ರಾಪ್ತನ ಅಜ್ಜ ಬಂಧನ

ಪುಣೆ: ಪೋರ್ಶೆ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಅಪ್ರಾಪ್ತನ ಅಜ್ಜನನ್ನು ಪುಣೆ ಪೊಲೀಸರು ಇಂದು ಬಂಧಿಸಿದ್ದಾರೆ. ಸುರೇಂದ್ರ ಅಗರ್ವಾಲ್ ಬಂಧಿತ ಅಜ್ಜ. ಕಾರು ಅಪಘಾತ ಸಂದರ್ಭದಲ್ಲಿ ತಾನೇ ಪೋರ್ಶೆಯನ್ನು ಚಲಾಯಿಸಿದ್ದಾಗಿ ಪೊಲೀಸರ ಮುಂದೆ ಹೇಳಿಕೆ ನೀಡಬೇಕು ಎಂದು ಚಾಲಕನಿಗೆ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಸುರೇಂದ್ರರನ್ನು ಬಂಧನ ಮಾಡಲಾಗಿದೆ.

ಪುಣೆ ಕ್ರೈಂ ಬ್ರಾಂಚ್ ದಾಖಲಿಸಿದ ಹೊಸ ಪ್ರಕರಣದಲ್ಲಿ ಸುರೇಂದ್ರ ಅಗರ್ವಾಲ್ ಅವರನ್ನು ಅವರ ನಿವಾಸದಿಂದ ಮುಂಜಾನೆ 3 ಗಂಟೆಗೆ ಬಂಧಿಸಲಾಯಿತು. ಈ ಮೂಲಕ ಪುಣೆ ಪೋರ್ಶೆ ಅಪಘಾತ ಪ್ರಕರಣದಲ್ಲಿ ಇದು ಮೂರನೇ ಎಫ್‌ಐಆರ್ ಆಗಿದೆ.

Leave a Reply

Your email address will not be published. Required fields are marked *