ಯತೀಂದ್ರ ಸಿದ್ದರಾಮಯ್ಯಗೆ ಪರಿಷತ್ ಸ್ಥಾನಕ್ಕಾಗಿ ಒಪ್ಪಂದ ಆಗಿತ್ತು – ಸತೀಶ್ ಜಾರಕಿಹೊಳಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರಿಗೆ ಪರಿಷತ್ ಸ್ಥಾನ ಬಹುತೇಕ ಫಿಕ್ಸ್ ಎನ್ನಲಾಗಿದ್ದು, ಸದಾಶಿವನಗರದ ನಿವಾಸದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್‌ ನೇತೃತ್ವದ ಸಭೆಯಲ್ಲೂ ಈ ಬಗ್ಗೆ ಸಚಿವರಿಗೆ ಸುಳಿವು ಸಿಕ್ಕಿದೆ. ಎಂಎಲ್‍ಸಿ ಆಯ್ಕೆ ವಿಚಾರವಾಗಿ ಮೇ 28, 29 ರಂದು ಸಿಎಂ ಹಾಗೂ ಡಿಸಿಎಂ ದೆಹಲಿಗೆ ತೆರಳಲಿರುವ ಹಿನ್ನೆಲೆಯಲ್ಲಿ ಇಂದು (ಮೇ 25) ಡಿಸಿಎಂ ಕೆಲವು ಸಚಿವರ ಜೊತೆ ಸಭೆ ನಡೆಸಿ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ.

ಸಭೆಯ ಬಳಿಕ ಈ ವಿಚಾರವನ್ನು ಸತೀಶ್ ಜಾರಕಿಹೊಳಿ ಮಾಧ್ಯಮಗಳೊಂದಿಗೆ ಮಾತನಾಡಿ, ಸಿಎಂ ಪುತ್ರ ಯತೀಂದ್ರಗೆ ವಿಧಾನ ಪರಿಷತ್ ಸ್ಥಾನ ಸಿಕ್ಕೇ ಸಿಗಲಿದೆ. ಸರ್ಕಾರ ರಚನೆಯ ಸಂದರ್ಭದಲ್ಲಿ ಅದರ ಬಗ್ಗೆ ಮಾತುಕತೆ ಆಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : – ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮನೆ ಮೇಲೆ ಕಲ್ಲು ತೂರಾಟ

Leave a Reply

Your email address will not be published. Required fields are marked *