ಜೂನ್ ಮೊದಲ ವಾರದಂದು ನಗರದಲ್ಲಿ ಲೋಕಸಭಾ ಚುನಾವಣೆಯ ಮತ ಎಣಿಕೆಯಿಂದಾಗಿ ಒಂದು ದಿನ ಹೊರತುಪಡಿಸಿದರೆ ಬರೋಬ್ಬರಿ 5 ದಿನಗಳ ಕಾಲ ಮದ್ಯದಂಗಡಿಗಳು ಬಂದ್ ಆಗಲಿವೆ. ಜೂ. 3 ರಂದು ಬೆಂಗಳೂರು ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ ನ ಒಂದು ಸ್ಥಾನಕ್ಕೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಯಲ್ಲಿ ಮತದಾನ ನಡೆಯಲಿದೆ. ಈ ಮೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ಜೂ.1ರ ಸಂಜೆ 4 ಗಂಟೆಯಿಂದ ಜೂ.3ರ ಸಂಜೆ 4 ಗಂಟೆ ವರೆಗೂ ಮದ್ಯವನ್ನು ನಿಷೇಧ ಮಾಡಲಾಗಿದೆ.

ಜೂ.4ರಂದು ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುವುದರಿಂದ ಅಂದು ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ನಿರ್ಬಂಧವಿದೆ. ವೈನ್ ಸ್ಟೋರ್, ಬಾರ್ ಆ್ಯಂಡ್ ರೆಸ್ಟೋರೆಂಟ್ ನವರು ಸೇರಿದಂತೆ ಯಾರೂ ಮದ್ಯ ಮಾರಾಟ ಮಾಡದಂತೆ ನಿರ್ಬಂಧ ವಿಧಿಸಲಾಗಿದೆ. ಜೂ.5ರಂದು ಎಂದಿನಂತೆ ಮದ್ಯ ಮಾರಾಟಕ್ಕೆ ಅವಕಾಶವಿದೆ. ಆದರೆ ಪುನಃ ಜೂ.6 ರಂದು ನಗರದಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಪದವೀಧರ ಕ್ಷೇತ್ರದ ಚುನಾವಣೆಯ ಮತ ಎಣಿಕೆ ನಡೆಯುವುದರಿಂದ ಅಂದೂ ಸಹ ನಗರದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಇರುವುದಿಲ್ಲ ಎಂದು ಸರಕಾರದಿಂದ ಆದೇಶಿಸಲಾಗಿದೆ.
ಇದನ್ನೂ ಓದಿ : – ಕುಮಾರಸ್ವಾಮಿ ಏನಾದರೂ ಸೆಕ್ಷನ್ ಹೇಳಿದ್ರೇ? – ಸಿದ್ದರಾಮಯ್ಯ ವ್ಯಂಗ್ಯ