ಬೆಳಗಾವಿಯಲ್ಲಿ ಸಂಪ್ ಗೆ ಬಿದ್ದು 2 ವರ್ಷದ ಮಗು ಸಾವು

ಆಟವಾಡುತ್ತಿದ್ದಾಗ 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಕಂಗ್ರಾಳ ಗಲ್ಲಿಯಲ್ಲಿ ನಡೆದಿದೆ. ಸಾಯೀಶಾ ಸಂದೀಪ್ ಬಡವನಾಚೆ (2) ಮೃತಪಟ್ಟ ದುರ್ದೈವಿ. ಆಟವಾಡುತ್ತಿದ್ದ ಮಗು ಕಣ್ಮರೆಯಾಗಿದ್ದು, ಪೋಷಕರು ತೀವ್ರ ಹುಡುಕಾಟ ನಡೆಸಿದ್ದಾರೆ.

ಎಷ್ಟೇ ಹುಡುಕಿದರೂ ಮಗು ಕಾಣದಿದ್ದಾಗ ಸಂಪ್ ತೆರೆದು ನೋಡಿದಾಗ ಮಗು ಬಿದ್ದಿರುವುದು ಕಂಡು ಬಂದಿದೆ. ಕೂಡಲೇ ಸಮೀಪದ ಆಸ್ಪತ್ರೆಗೆ ಮಗುವನ್ನು ಕರೆದೊಯ್ದರು ಆದರೆ ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಮಗುವು ಸಾವನ್ನಪ್ಪಿರುವ ಬಗ್ಗೆ ವೈದ್ಯರು ಸ್ಪಷ್ಟಪಡಿಸಿದ್ದಾರೆ.  

ಇದನ್ನೂ ಓದಿ : – ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಹೆಚ್. ಡಿ. ರೇವಣ್ಣ

Leave a Reply

Your email address will not be published. Required fields are marked *